ಮಂಗಳೂರು: ಸುರತ್ಕಲ್ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿ ಯುವಕರಲ್ಲಿ ಓರ್ವ ನೀರುಪಾಲಾದ ಘಟನೆ ಆ.24 ರಂದು ನಡೆದಿದೆ.
ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ.

ಒಂದೇ ಕುಟುಂಬದ 6 ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮುಂಡಾ ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಅವರು ನೀರಿನಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಮುಹಮ್ಮದ್ ಸಮೀರ್, ರಯೀಸ್,ಐಮಾನ್, ಫಾಝಿಲ್ ಸಮುದ್ರ ಪಾಲಾಗಿದ್ದರು. ಕೂಡಲೇ ದಡದಲ್ಲಿದ್ದವರು ಬೊಬ್ಬೆ ಹಾಕಿದ್ದು, ಬೊಬ್ಬೆಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




