Breaking
22 Mar 2026, Sun

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ; ಆ.27ರಿಂದ 31ರವರೆಗೆ 22ನೇ ವರ್ಷದ ಶ್ರೀ ಗಣೇಶೋತ್ಸವ

ಬಂಟ್ವಾಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ 22ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್‌ 27ರಿಂದ 31ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಇಂದು (ಆ.25) ಬಂಟ್ವಾಳ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್‌ 27ರಂದು ಬೆಳಿಗ್ಗೆ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಆಗಸ್ಟ್‌ 31ರ ತನಕವೂ ವಿವಿಧ ವೈಧಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆಗಸ್ಟ್‌ 31ರ ಸಂಜೆ ಸಂಧ್ಯಾಪೂಜೆ ನಡೆದು ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *