Breaking
22 Mar 2026, Sun

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮವು ಬೊಳಂತಿಮೊಗೇರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.24 ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಟ್ಲ ವಲಯ ಜನಜಾಗ್ರತಿ ವೇದಿಕೆ ಅಧ್ಯಕ್ಷ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡಿ ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ಹೆಗ್ಡೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ದ ನಾವು ಸೆಟದು ನಿಲ್ಲಬೇಕು ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಮಾಮೇಶ್ವರ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಮಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಯೋಜನೆ ಬಂಟ್ವಾಳ ತಾಲೂಕಿನಲ್ಲಿ ಪ್ರಾರಂಭವಾಗಿ 20 ವರ್ಷಗಳಲ್ಲಿ ಮಾಡಿದ ಕಾರ್ಯ ಸಾಧನೆ ಹಾಗೂ ಯೋಜನೆ ಮೂಲಕ ಸಮುದಾಯಕ್ಕೆ ನೀಡಿದ ಸಹಕಾರವನ್ನು ಸದಸ್ಯರುಗಳಿಗೆ ಮತ್ತೊಮ್ಮೆ ನೆನಪಿಸಿದರು.

ಈ ಸಂದರ್ಭದಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿರುವ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳನ್ನು ಗುರುತಿಸಿ ಗೌರವಿಸಿ ಪರಿಸರ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರತಿಯೊಬ್ಬರಿಗೂ ಸಸಿ ವಿತರಿಸಲಾಯಿತು. ಎಸ್ ಎಸ್ ಎಲ್ ಸಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳನ್ನು ಗುರುತಿಸಿ ಅಭಿನಂದಿಸಲಾಯಿತು.

ಸಭಾ ಕಾರ್ಯಕ್ರಮದ ಮೊದಲು ಭಜನಾ ಕಾರ್ಯಕ್ರಮ ಜರಗಿತು. ವೇದಿಕೆಯಲ್ಲಿ ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ಗೌಡ, ಸದಸ್ಯರುಗಳಾದ ಚಂದ್ರಶೇಖರ್ ಗೌಡ ಕೆಲಿಂಜ, ಅಬ್ದುಲ್ ರೆಹಿಮಾನ್, ಯೋಜನೆಯ ವಲಯ ಅದ್ಯೇಕ್ಷೆ ತುಳಸಿ, ಮಾಮೇಶ್ವರ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ವೀರಪ್ಪಗೌಡ, ವಿಟ್ಲ ತಾಲೂಕು ಭಜನಾ ಪರಿಷತ್ ಕೋಶಾಧಿಕಾರಿ ಜಯರಾಮ್ ರೈ, ಊರಿನ ಗುರಿಕಾರ ರಾಗವ ಗೌಡ ಅಡ್ಡಳ್ಳಿ, ಕೆಲಿಂಜ ಒಕ್ಕೂಟದ ಅಧ್ಯಕ್ಷ ದಯಾನಂದ, ಬೋಳಂತೂರು ಒಕ್ಕೂಟದ ಅಧ್ಯಕ್ಷ ಸೀತಾ, ಗೊಳ್ತಾಮಜಲ್ ಸಿ ಒಕ್ಕೂಟದ ಅಧ್ಯಕ್ಷ ಮಮತಾ, ಒಕ್ಕೂಟದ ಪದಾಧಿಕಾರಿಗಳಾದ ಪುರಂದರ, ಯಶೋಧ, ಮೀನಾಕ್ಷಿ ರಮೇಶ್ ಗೌಡ,ದಿವಾಕರ ಶೆಟ್ಟಿ, ಗಣೇಶ, ಪುರಂದರ ಗೌಡ ರಮೀಜಾ ಮೊದಲಾದವರು ಉಪಸ್ಥಿತರಿದ್ದರು.

ಕಲ್ಲಡ್ಕ ವಲಯ ಮೇಲ್ವಿಚಾರಕ ಸುಕರಾಜ್ ಸ್ವಾಗತಿಸಿ, ಸೇವಾ ಪ್ರತಿನಿಧಿ ಯಶೋದಾ ವರದಿ ವಾಚಿಸಿ, ಪುರಂದರ ಗೌಡ ವಂದಿಸಿದರು. ಹರೀಶ್ ಎಸ್ ಪಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

Leave a Reply

Your email address will not be published. Required fields are marked *