Breaking
22 Mar 2026, Sun

ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಬೆಳ್ತಂಗಡಿ: ಕೆರೆಯಲ್ಲಿ ಗಾಳ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಪಲ್ಲಾದೆ ಎಂಬಲ್ಲಿ ನಡೆದಿದೆ.

ಮೃತರನ್ನು ಶ್ರೀಧರ ಎಂದು ಗುರುತಿಸಲಾಗಿದೆ.

ಇವರು ಪಲ್ಲಾದೆಯಲ್ಲಿರುವ ಖಾಸಗಿ ತೋಟದಲ್ಲಿರುವ ದೊಡ್ಡ ಕೆರೆಗೆ ಮೀನು ಹಿಡಿಯಲೆಂದು ಬಂದಿದ್ದಾರೆ.

ಈ ವೇಳೆ ಶ್ರೀಧರ ಅವರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರಬಹುದು ಎಂದು ಅನುಮಾನಿಸಲಾಗಿದೆ

ಕೆರೆಯಲ್ಲಿ ಮಂಗಳವಾರ ಮೃತದೇಹ ಪತ್ತೆಯಾಗಿದ್ದು ಸ್ಥಳೀಯರ ಸಹಕಾರದೊಂದಿಗೆ ಮೃತದೇಹವನ್ನು ಪೊಲೀಸರು ಮೇಲಕ್ಕೆ ಎತ್ತಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *