ಕಾಸರಗೋಡು: ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಆ.28) ಮುಂಜಾನೆ ಅಂಬಲತ್ತರದಲ್ಲಿ ನಡೆದಿದೆ.

ಮೃತಪಟ್ಟವರನ್ನು ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಪುತ್ರ ರಾಕೇಶ್ ಗಂಭೀರ ಸ್ಥಿತಿಯಲ್ಲಿದ್ದು ಅವರನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳೀಯರು ತಕ್ಷಣವೇ ನಾಲ್ವರನ್ನು ಆಸ್ಪತ್ರೆಗೆ ಸಾಗಿಸಿದರೂ ಮೂವರು ಮೂವರು ಮೃತಪಟ್ಟಿದ್ದಾರೆ. ಆರ್ಥಿಕ ಪರಿಸ್ಥಿತಿಯೇ ಈ ಘಟನೆಗೆ ಪ್ರಮುಖ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ.



