Breaking
6 May 2026, Wed

ತಲಪಾಡಿ ಬಳಿ ಬಸ್-ಆಟೋ ನಡುವೆ ಭೀಕರ ಅಪಘಾತ- ಐವರು ಸ್ಥಳದಲ್ಲೇ ಸಾವು

ತಲಪಾಡಿ : ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.

ಕೆ.ಸಿ. ರೋಡ್ ನಿಂದ ಬರುತ್ತಿದ್ದ ಆಟೋ ರಿಕ್ಷಾ ಮತ್ತು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿ ಈ ಅವಘಡ ಉಂಟಾಗಿದೆ.

ಆಟೋ ರಿಕ್ಷಾದಲ್ಲಿದ್ದ ಕೆ.ಸಿ. ರೋಡ್ ಮೂಲದವರು ಇದ್ದರು ಎನ್ನಲಾಗಿದ್ದು 5 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂಬ ಆರಂಭಿಕ ಮಾಹಿತಿ ಲಭ್ಯವಾಗಿದೆ.

ಈ ಘಟನೆಯಿಂದ ರಸ್ತೆಯಲ್ಲಿ ದೊಡ್ಡ ಟ್ರಾಫಿಕ್ ಜಾಮ್ ಉಂಟಾಗಿತ್ತು. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದೆ.

ಸ್ಥಳೀಯರ ಸಹಕಾರದಿಂದ ಮೃತ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *