ಬಂಟ್ವಾಳ: ಕಳೆದ ಕೆಲ ದಿನಗಳಿಂದ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಹಲವೆಡೆ ಹಾನಿ ಸಂಭವಿಸಿದೆ.

ಬಂಟ್ವಾಳ ಮೂಡ ನಡುಗೋಡು ಗ್ರಾಮದ ದಂಡೆ ಮಜಲು ಎಂಬಲ್ಲಿ ರಾಮಣ್ಣ ನಾಯಕ್ ಎಂಬವರ ಮನೆ ಮಳೆಯಿಂದ ತೀವ್ರ ಹಾನಿಗೊಳಗಾಗಿದ್ದು, ಕುಟುಂಬದವರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಪಕ್ಕದಲ್ಲೇ ಇರುವ ಸಹೋದರನ ಮನೆಗೆ ಸ್ಥಳಾಂತರಗೊಂಡಿದ್ದಾರೆ.

ಇನ್ನೂ ಅಮ್ಟಾಡಿ ಗ್ರಾಮದ ಪೆದಮಲೆ ಎಂಬಲ್ಲಿ ಬಂಟ್ವಾಳ- ಸಿದ್ದಕಟ್ಟೆ ಸಂಪರ್ಕಿಸುವ ರಾಜ್ಯ ಹೆದ್ದಾರಿ ಬದಿಯಲ್ಲಿ ಮಣ್ಣು ಕುಸಿದಿದ್ದು, ಕಂದಾಯ ಅಧಿಕಾರಿಗಳು ಮಾಹಿತಿ ಪಡೆದು ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಕ್ರಮ ಕೈಗೊಂಡಿದ್ದಾರೆ.




