ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಬಗ್ಗೆ ಅವ್ಯಾಚ ಶಬ್ದಗಳಿಂದ ಮಾತನಾಡಿದ ಬಗ್ಗೆ ಉಡುಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆ.21 ರಂದು ಮಹೇಶ್ ಶೆಟ್ಟಿ ತಿಮರೋಡಿಯ ಉಜಿರೆ ನಿವಾಸದಿಂದ ಬ್ರಹ್ಮಾವರ ಪೊಲೀಸರು ಬಂಧಿಸಲು ತೆರಳಿದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಎ3 ಆರೋಪಿ ಆಗಿದ್ದರು. ಇದರ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.



