ಪುತ್ತೂರು: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ಆ.29ರಂದು ಮಧ್ಯಾಹ್ನದ ವೇಳೆ ನಡೆದಿದೆ.

ಗಾಯಾಳುಗಳನ್ನು ಹಿರೇಬಂಡಾಡಿ ಗ್ರಾಮದ ವಳಕಡಮ ನಿವಾಸಿ ಬೊಮ್ಮಣ್ಣ ಗೌಡ(46ವ.)ಹಾಗೂ ಅವರ ಪತ್ನಿ ಕುಸುಮಾವತಿ(35ವ.) ಎಂದು ಗುರುತಿಸಲಾಗಿದೆ.

ಇವರು ತಮ್ಮ ದ್ವಿಚಕ್ರ ವಾಹನದಲ್ಲಿ ವಳಕಡಮದಿಂದ ರಾಮಕುಂಜ-ಗೋಳಿತ್ತೊಟ್ಟು ಮಾರ್ಗವಾಗಿ ಸೌತಡ್ಕ ದೇವಸ್ಥಾನಕ್ಕೆ ಹೋಗುತ್ತಿದರು. ಗೋಳಿತ್ತೊಟ್ಟು ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಕ್ರಾಸ್ ಆಗುತ್ತಿದ್ದಂತೆ ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಬೊಮ್ಮಣ್ಣ ಗೌಡ ಹಾಗೂ ಕುಸುಮಾವತಿಯವರು ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.


