Breaking
19 Sep 2026, Sat

ಉಡುಪಿ: ಅಕ್ರಮ ಮದ್ಯ ಮಾರಾಟ; ಆರೋಪಿ ಅರೆಸ್ಟ್

ಕುಂದಾಪುರ: ತಾಲೂಕಿನ ಹೆಸ್ಕತ್ತೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕುಂದಾಪುರ ಪೊಲೀಸರು ಪತ್ತೆ ಹಚ್ಚಿ ಓರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮದ ನೂಜಿ ನಿವಾಸಿ ಶೇಷಾದ್ರಿ(43) ಎಂದು ಗುರುತಿಸಲಾಗಿದೆ.

ಗಣೇಶ ಹಬ್ಬದ ಪ್ರಯುಕ್ತ ಉಡುಪಿ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಈ ನಡುವೆಯೂ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯ ಸಬ್ ಇನ್ಸ್‌ ಪೆಕ್ಟರ್‌ ಭೀಮಾಶಂಕರ ಸಿನ್ನೂರ ಸಂಗಣ್ಣ ಅವರ ನೇತೃತ್ವದ ಪೊಲೀಸ್‌ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಯಿಂದ ಒಟ್ಟು 13,650 ರೂಪಾಯಿ ಮೌಲ್ಯದ 273 ಪ್ಯಾಕೆಟ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *