Breaking
20 Jun 2026, Sat

ಮಂಗಳೂರು: ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಆರೋಪಿ ಪೊಲೀಸ್‌ ವಶಕ್ಕೆ

ಮಂಗಳೂರು: ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದೆ.

ಈತ ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ ಎಂದು ತಿಳಿದುಬಂದಿದೆ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿ ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆ.29 ರಂದು ಮಾದಕ ವಸ್ತುವನ್ನು ಪತ್ತೆ ಹಚ್ಚಿದ್ದಾರೆ.

ಆತನ ವಶದಿಂದ 10,85,000 ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು 11,05,500 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *