Breaking
21 Mar 2026, Sat

ಸ್ಕೂಟಿ ನಿಯಂತ್ರಣ ತಪ್ಪಿ ವಿದ್ಯಾರ್ಥಿ ಸಾವು

ಕಾಸರಗೋಡು: ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ಸ್ಕೂಟಿ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಆ. 29 ರ ರಾತ್ರಿ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಎಂದು ಗುರುತಿಸಲಾಗಿದೆ.

ಇವರು ಯೂಸಫ್ ಶಿರಿಯ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ತಕ್ಷಣವೇ ಗಂಭೀರ ಗಾಯಗೊಂಡ ಯೂಸಫ್ ನನ್ನು ಕುಂಬಳೆಯ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *