ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘ (ರಿ.) ನಾರಾಯಣಗಿರಿ ಸಿದ್ದಕಟ್ಟೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ 171ನೇ ಜಯಂತಿಯ ಅಂಗವಾಗಿ ಗುರುಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಸಿದ್ದಕಟ್ಟೆ ನಾರಾಯಣಗುರು ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಕಿರಣ್ ಕುಮಾರ್ ಮಂಜಿಲ, ಉಪಾಧ್ಯಕ್ಷರಾದ ಸತೀಶ್ ಪೂಜಾರಿ ಅಲಕ್ಕೆ, ಪ್ರಧಾನ ಕಾರ್ಯದರ್ಶಿ ರತ್ನಾಕರ ಪೂಜಾರಿ ಮದಂಗೋಡಿ, ಕೋಶಾಧಿಕಾರಿ ಯೋಗೀಶ್ ಪೂಜಾರಿ, ಲೆಕ್ಕ ಪರಿಶೋಧಕರಾದ ಸಂತೋಷ ಪೂಜಾರಿ ಬೆಟ್ಟುಕೋಡಿ, ಜೊತೆ ಕಾರ್ಯದರ್ಶಿ ರಮೇಶ್ ಪೂಜಾರಿ ಮಜಲು, ಮಹಿಳಾ ಸಮಿತಿ ಅಧ್ಯಕ್ಷರಾದ ಅನುರಾಧ ಜಾನುಗುರಿ, ಮಹಿಳಾ ಸಮಿತಿಯ ಅರುಣಾ ವಿಶ್ವನಾಥ್ ದೋಟ, ಸಮಿತಿ ಸದಸ್ಯ ಡಾ.ಯೋಗೀಶ್ ಕೈರೋಡಿ, ಕಾರ್ಯ ಕಾರಿಣಿ ಸಮಿತಿ ಸದಸ್ಯರು, ವಿಶೇಷ ಆಹ್ವಾನಿತ ಸದಸ್ಯರು, ಮಹಿಳಾ ಸಮಿತಿಯ ಕಾರ್ಯ ಕಾರಿಣಿ ಸದಸ್ಯರು, ಗ್ರಾಮ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಗೂ ಬೂತ್ ಸಂಚಾಲಕರು, ಬಿಲ್ಲವ ಸಮಾಜ ಭಾಂದವರು ಉಪಸ್ಥಿತರಿದ್ದರು.

ಸೆಪ್ಟೆಂಬರ್ 7ರಂದು ಗುರುಪೂಜೋತ್ಸವ ನಡೆಯಲಿದ್ದು ಬೆಳಿಗ್ಗೆ ಭಜನಾ ಕಾರ್ಯಕ್ರಮ ನಡೆಯಲಿದೆ. ಸಭಾಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ, ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ನಾಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್, ಉದ್ಯಮಿ ಸದಾನಂದ ಪೂಜಾರಿ ಪೂನಾ ಭಾಗವಹಿಸಲಿದ್ದಾರೆ.

ವೆನ್ ಲಾಕ್ ಆಸ್ಪತ್ರೆ ಯ ಮೂತ್ರ ರೋಗ ತಜ್ಞರಾದ ಡಾ. ಸದಾನಂದ ಪೂಜಾರಿ ಇವರಿಗೆ ಸನ್ಮಾನ ಕಾರ್ಯಕ್ರಮ ಹಾಗೂ 2025ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 85%ಕ್ಕಿಂತ ಹೆಚ್ಚು ಅಂಕಗಳಿಸಿದ ಬಿಲ್ಲವ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.


