ಉಡುಪಿ: ಎಂಟು ವರ್ಷಗಳಿಂದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಅಂತರ್ ಜಿಲ್ಲಾ ಆರೋಪಿಯನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಮೈಸೂರು ಜಿಲ್ಲೆಯ ಇಕ್ಬಾಲ್ ಅಹಮದ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆಗಸ್ಟ್ 29 ರಂದು ದುಬೈನಿಂದ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಇಮಿಗ್ರೇಶನ್ ಅಧಿಕಾರಿಗಳು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಯು ಶಿರ್ವ, ಮಣಿಪಾಲ ಮತ್ತು ತೀರ್ಥಹಳ್ಳಿ ಕಡೆಗಳಲ್ಲಿ ಕಳ್ಳತನ ಮಾಡಿದ್ದು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅನ್ಸಾರಿ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪಡುಬಿದ್ರಿ ಪೊಲೀಸ್ ಠಾಣೆಗೆ ಕರೆತಂದು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.



