Breaking
25 Sep 2026, Fri

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರರ ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್ನ ಗಡಿ ನಿಯಂತ್ರಣಾ ರೇಖೆಯಲ್ಲಿ ಅಕ್ರಮವಾಗಿ ಗಡಿ ನುಸುಳಲು ಯತ್ನಿಸಿದ ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ.

ಉಗ್ರರ ಒಳನುಸುಳುವಿಕೆಯ ಬಗ್ಗೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿ ಆಧರಿಸಿ ಸೇನಾ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಭದ್ರತಾ ಪಡೆ ಕೂಡ ಪ್ರತಿದಾಳಿ ನಡೆಸಿ ಇಬ್ಬರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಘಟನಾ ಸ್ಥಳದಲ್ಲಿ ಭಯೋತ್ಪಾದನಾ ನಿಗ್ರಹ ದಳದಿಂದ ಶೋಧ ಕಾರ್ಯಾಚರಣೆ ಮುಂದುವರಿದಿದೆ.

Leave a Reply

Your email address will not be published. Required fields are marked *