Breaking
23 Mar 2026, Mon

ಸುರತ್ಕಲ್ ನಲ್ಲಿ ದ್ವಿಚಕ್ರಕ್ಕೆ ಕಾರು ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು,ಸಹಸವಾರ ಗಂಭೀರ

ಸುರತ್ಕಲ್ : ಕಾರೊಂದು ಚಾಲಕ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.

ಅಪಘಾತದಲ್ಲಿ ಚೇಳಾಯರು ನಿವಾಸಿಯಾಗಿರುವ ಕರುಣಾಕರ ಶೆಟ್ಟಿ (61) ಎಂಬವರು ಮೃತಪಟ್ಟಿದ್ದಾರೆ.

ಮೂಲತಃ ಉತ್ತರ ಕರ್ನಾಟಕದ ಸದ್ಯ ಚೇಳಾಯರಿನಲ್ಲಿ ವಾಸವಿರುವ ಹನುಮಂತ ಎಂಬವರ ಮಗ ವಿಶ್ವನಾಥ ಎಂಬವರು ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫಿಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕರುಣಾಕರ ಶೆಟ್ಟಿ ಅವರು ಮುಕ್ಕದಲ್ಲಿನ ಅಂಗಡಿ ಮುಚ್ಚಿ ಹಾಲಿಗೆ ಬಂದಿದ್ದ ನೆರೆ ಮನೆಯ ವಿಶ್ವನಾಥ ಅವರನ್ನು ಕುಳ್ಳಿರಿಸಿಕೊಂಡು ರಾಷ್ಟ್ರೀಯ ಹೆದ್ದಾರಿ 66ನ್ನು ತನ್ನ ದ್ವಿಚಕ್ರ ವಾಹನದಲ್ಲಿ ದಾಟುತ್ತಿದ್ದ ವೇಳೆ ಹಳೆಯಂಗಡಿ ಕಡೆಯಿಂದ ಸುರತ್ಕಲ್ ಕಡೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿದೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಕರುಣಾಕರ ಶೆಟ್ಟಿ ಅವರು ಸುಮಾರು 50ಮೀಟರ್ ದೂರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ತಲೆಗೆ ಬಲವಾದ ಹೊಡೆತ ಬಿದ್ದು, ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ.

ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *