Breaking
25 Sep 2026, Fri

ಧರ್ಮಸ್ಥಳದ ಕುರಿತು ಅಪಪ್ರಚಾರ : ಇಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಪಾದಯಾತ್ರೆ

ಧರ್ಮಸ್ಥಳ: ಶ್ರೀ ಕ್ಷೇತ್ರದ ಕುರಿತು ಅಪಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಸತ್ಯ ಯಾತ್ರೆ ನಡೆಸಲಾಗಿದ್ದು, ಇಂದು(ಸೆ.01) ಬಿಜೆಪಿ ನಾಯಕರು ಧರ್ಮಸ್ಥಳ ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

ಧರ್ಮಸ್ಥಳದಲ್ಲಿ ಎಸ್ ಡಿ ಎಮ್ ಕಾಲೇಜ್ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ನಡೆಯಲಿದೆ.

ಸಮಾವೇಶದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯರು, ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮಾಜಿ ಎಂಎಲ್ಸಿ ಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಅನೇಕರು ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *