Breaking
23 Mar 2026, Mon

ಗಂಟಲಲ್ಲಿ ಅನ್ನ ಸಿಲುಕಿ ಯುವಕನ ದುರಂತ ಅಂತ್ಯ

ಕಾರವಾರ: ಗಂಟಲಲ್ಲಿ ಅನ್ನ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾದಲ್ಲಿ ನಡೆದಿದೆ.

ಮೃತನನ್ನು ಅಮಿತ್ ಮಾಳಸೇರ್ (38) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಅಮಿತ್ ಅವರು ಭಾನುವಾರ ಮನೆಯಲ್ಲಿ ಊಟ ಮಾಡುತ್ತಿದ್ದಾಗ ಅನ್ನದ ಅಗಳೊಂದು ಗಂಟಲಲ್ಲಿ ಸಿಲುಕಿತ್ತು. ತಕ್ಷಣ ಮನೆಯವರು ಅಮಿತ್ಗೆ ನೀರು ಕುಡಿಸಿದ್ದು, ಆತ ಅಲ್ಲೇ ಕುಸಿದು ಬಿದ್ದಿದ್ದಾನೆ.

ಕೂಡಲೇ ಆತನನ್ನು ಅಂಬುಲೆನ್ಸ್ ಮೂಲಕ ಕಾರವಾರದ ಕ್ರಿಮ್ಸ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು.

ಪರೀಕ್ಷಿಸಿದ ವೈದ್ಯರು ಗಂಟಲಲ್ಲಿ ಅನ್ನದ ಅಗಳು ಸಿಲುಕಿ ಅಮಿತ್ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

ಅಮಿತ್, ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವೈದ್ಯರಿಂದ ಚಿಕಿತ್ಸೆಯನ್ನು ಸಹ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.

Leave a Reply

Your email address will not be published. Required fields are marked *