ರಾಯಚೂರು: ಲಾರಿ ಹರಿದು ವ್ಯಕ್ತಿಯೊಬ್ಬ ಮೃತಪಟ್ಟ ಹೃದಯ ವಿದ್ರಾವಕ ಘಟನೆ ರಾಯಚೂರಿನ ಶಕ್ತಿನಗರ ಬಳಿ ಸೆ.1 ರಂದು ಬೆಳಗ್ಗೆ ನಡೆದಿದೆ.
ಶಕ್ತಿನಗರದ ಲೇಬರ್ ಕಾಲನಿ ನಿವಾಸಿ ಸಿಂಹಾದ್ರಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.

ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಸಿಂಹಾದ್ರಿ ಅವರು ಅಪಘಾತದಲ್ಲಿ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ ತಲೆ ಮೇಲೆಯೆ ಲಾರಿ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭ ಆಟೋ ಚಾಲಕರು, ಸ್ಥಳೀಯರು ಸೇರಿ ಪ್ರತಿಭಟನೆ ನಡೆಸಿದ್ದು ರಸ್ತೆಯಲ್ಲಿ ಹಾರುಬೂದಿ ಟ್ಯಾಂಕರ್ ಗಳು ಸೇರಿ ಭಾರೀ ವಾಹನಗಳ ಸಂಚಾರ ಹೆಚ್ಚಾಗಿದ್ದು, ಪ್ರಯಾಣಿಕರ ಜೀವಕ್ಕೆ ರಕ್ಷಣೆ ಇಲ್ಲದಂತಾಗಿದೆ.

ಕೂಡಲೇ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು. ಭಾರೀ ವಾಹನಗಳ ಸಂಚಾರಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.



