ಬೆಂಗಳೂರು: ಕಳೆದ ಆರು ವರ್ಷಗಳಿಂದ ನಕಲಿ ಗುರುತಿನೊಂದಿಗೆ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಆತನ ಪತ್ನಿ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯ ಪ್ರಕಾರ, ಪಾಕ್ ಪ್ರಜೆ ಪತ್ನಿ ಬಾಂಗ್ಲಾದೇಶದವರಾಗಿದ್ದು ಢಾಕಾದಲ್ಲಿ ವಿವಾಹವಾಗಿದ್ದರು. 2014ರಲ್ಲಿ ದೆಹಲಿಗೆ ಬಂದಿದ್ದ ದಂಪತಿಗಳು ನಂತರ 2018ರಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಬಂಧಿತ ಇನ್ನಿಬ್ಬರು ಆತನ ಸೋದರ ಅಳಿಯಂದಿರು ಎಂದು ತಿಳಿದುಬಂದಿದೆ.
ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ಬೆಂಗಳೂರು ಪೊಲೀಸರು ಭಾನುವಾರ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು. ಜಿಗಣಿ ಇನ್ಸ್‌ಪೆಕ್ಟರ್ ಈ ಬಗ್ಗೆ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಒಂದೇ ಕುಟುಂಬದ ನಾಲ್ವರು ಅಕ್ರಮವಾಗಿ ಅಕ್ರಮ ದಾಖಲೆಗಳ ಸಹಾಯದಿಂದ ಇಲ್ಲಿ ವಾಸವಿದ್ದರು. ಇದೀಗ ಪ್ರಕರಣ ದಾಖಲಿಸಿಕೊಂಡು ಆ ನಾಲ್ವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸಂಪೂರ್ಣ ವಿಚಾರಣೆ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಕುಟುಂಬ ಕಳೆದ ಆರು ವರ್ಷಗಳಿಂದ ಜಿಗಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಅವರೆಲ್ಲಾ ಹಿಂದೂ ಹೆಸರಿನೊಂದಿಗೆ ಗುರುತಿನ ದಾಖಲೆಗಳನ್ನು ಮಾಡಿಸಿಕೊಂಡಿದ್ದಾರೆ. ಪಾಕ್ ಪ್ರಜೆಯ ಜಾಲ ಮತ್ತು ಚಟುವಟಿಕೆಗಳ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಾವು ಅವರ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದೇವೆ. ಆತ ಗ್ಯಾರೇಜ್‌ಗೆ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದನು ಎಂಬುದು ಆದರೆ ತನಿಖೆ ನಡೆಸಬೇಕಾಗಿದೆ ಎಂದು ಅವರು ಹೇಳಿದರು.
ಬಂಧಿತರು ಪಾಕಿಸ್ತಾನ ಪ್ರಜೆ ರಷೀದ್ ಸಿದ್ದಿಕಿ ಅಲಿಯಾಸ್ ಶಂಕರ್ ಶರ್ಮಾ (48), ಆಯುಷಾ ಅನಿಫ್ ಅಲಿಯಾಸ್ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್ ರಾಮ್ ಬಾಬಾ ಶರ್ಮಾ (73), ರುಬೀನಾ ಅಲಿಯಾಸ್ ರಾಣಿ ಶರ್ಮಾ (61) ಎಂದು ತಿಳಿದುಬಂದಿದೆ.