Breaking
10 May 2026, Sun

ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ಯುವಕ ಸಾವು

ಮೈಸೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕ ಆಟೋ ರಾಜು(34) ಎಂದು ತಿಳಿದು ಬಂದಿದೆ.

ಗ್ರಾಮಸ್ಥರು ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್ ಮೂಲಕ ಮೆರವಣಿಗೆ ನಡೆಸುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಗಣೇಶ ಮೆರವಣಿಗೆ ವೇಳೆ ಗಣಪನ ಮೂರ್ತಿ ಮನೆಯ ಬಳಿಗೆ ಬಂದಾಗ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಏರಿದ್ದರು.

ಈ ಸಂದರ್ಭ ಏಕಾಏಕಿ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಅವರನ್ನು ಹುಣಸೂರು ಆಸ್ಪತ್ರೆಗೆ ಸಾಗಿಸಲು ಗ್ರಾಮಸ್ಥರು ಮುಂದಾದರು. ಆದರೆ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *