Breaking
25 Sep 2026, Fri

ಅಪ್ಘಾನಿಸ್ತಾನದಲ್ಲಿ ಭೀಕರ ಭೂಕಂಪ 600ಕ್ಕೂ ಅಧಿಕ ಮಂದಿ ಬಲಿ,1300ಕ್ಕೂ ಅಧಿಕ ಮಂದಿಗೆ ಗಾಯ

ಕಾಬೂಲ್: ಅಪ್ಘಾನಿಸ್ತಾನದಲ್ಲಿ ಭೀಕರ ಭೂಕಂಪಕ್ಕೆ 600ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು ಸುಮಾರು 1300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 6.0 ರಷ್ಟು ತೀವ್ರತೆಯ ಭೂಕಂಪ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಹಲವಾರು ಮಕ್ಕಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಅಫ್ಘಾನಿಸ್ತಾನದಾದ್ಯಂತ ಕೆಲವು ಸೆಕೆಂಡುಗಳ ಕಾಲ ಕಟ್ಟಡಗಳು ಕಂಪಿಸಿದವು, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಸುಮಾರು 370 ಕಿ.ಮೀ ದೂರದಲ್ಲಿ ಕಂಪನದ ಅನುಭವವಾಯಿತು ಎಂದು ತಿಳಿಸಿದ್ದಾರೆ.

ಇತ್ತ ಯುರೇಷಿಯನ್ ಮತ್ತು ಭಾರತೀಯ ಟೆಕ್ಟೋನಿಕ್ ಪ್ಲೇಟ್ಗಳ ಜಂಕ್ಷನ್ ಬಳಿ, ವಿಶೇಷವಾಗಿ ಹಿಂದೂ ಕುಶ್ ಪ್ರದೇಶದಲ್ಲಿ ಅಫ್ಘಾನಿಸ್ತಾನ ಇರುವುದರಿಂದ ಈ ಪ್ರದೇಶಗಳಲ್ಲಿ ಹೆಚ್ಚು ಭೂಕಂಪ ಸಂಭವಿಸುತ್ತದೆ.

ನಂಗರ್ಹಾರ್ ಪ್ರಾಂತ್ಯದಲ್ಲಿ ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಭಾರೀ ಪ್ರವಾಹ ಉಂಟಾಗಿ ಐದು ಜನರು ಸಾವನ್ನಪ್ಪಿ, ಬೆಳೆಗಳು ಮತ್ತು ಆಸ್ತಿಪಾಸ್ತಿಗಳು ನಾಶವಾದ ಕೆಲವೇ ದಿನಗಳ ನಂತರ ಈ ಭೂಕಂಪ ಸಂಭವಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *