Breaking
21 Mar 2026, Sat

ಕೋಲ್ನಾಡು ಬಳಿ ಗಾಂಜಾ‌ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ

ಮೂಲ್ಕಿ: ಕೋಲ್ನಾಡು ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಯನ್ನು ಮಂಗಳೂರು ಕೋಡಿಕಲ್‌ ನಡಿಗುತ್ತು ನಿವಾಸಿ ದಿನೇಶ್ ಕುಮಾರ್ (35) ಎಂದು ಗುರುತಿಸಲಾಗಿದೆ.

ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಯತ್ನದಲ್ಲಿದ್ದಾಗಲೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈತನಿಂದ ಸುಮಾರು 35 ಸಾವಿರ ರೂ. ಮೌಲ್ಯದ ಗಾಂಜಾ ಮತ್ತು ನಗದು ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *