Breaking
22 Mar 2026, Sun

ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಕೊಂದ ಪಾಪಿ

ಬೆಂಗಳೂರು: ವ್ಯಕ್ತಿಯೋರ್ವ ತನ್ನ ಲಿವ್ ಇನ್ ಗೆಳತಿಯನ್ನು ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಸುಟ್ಟುಹಾಕಿರುವ ಘಟನೆ ಬೆಂಗಳೂರು ನಗರದ ಹೊರವಲಯದ ಹುಳಿಮಾವು ಬಳಿ ನಡೆದಿದೆ.

ಮೃತ ಮಹಿಳೆಯನ್ನು ವನಜಾಕ್ಷಿ (26) ಎಂದು ಗುರುತಿಸಲಾಗಿದ್ದು, ಆರೋಪಿ ವಿಠ್ಠಲ (52) ಈ ಕೃತ್ಯವನ್ನು ಎಸಗಿದ್ದಾನೆ.

ವೃತ್ತಿಯಲ್ಲಿ ಕ್ಯಾಬ್ ಚಾಲಕನಾಗಿದ್ದ ವಿಟ್ಠಲ ಮತ್ತು ಮೃತ ವನಜಾಕ್ಷಿ ಕಳೆದ ಮೂರು ವರ್ಷಗಳಿಂದ ಇಬ್ಬರು ಲಿವಿಂಗ್ ಟುಗೆದರ್‌ನಲ್ಲಿದ್ದರು. ಆದರೆ ಇತ್ತೀಚೆಗೆ ಮೃತ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ವಿಠ್ಠಲನಿಗೆ ಅನುಮಾನ ಮೂಡಿತ್ತು ಎನ್ನಲಾಗಿದೆ.

ಇದರಿಂದಾಗಿ ವಿಠ್ಠಲ ಆಕೆಯನ್ನು ಫಾಲೋ ಮಾಡಲು ಶುರು ಮಾಡಿದ್ದ. ಇದೇ ಸಮಯದಲ್ಲಿ ವನಜಾಕ್ಷಿ ಬೇರೊಬ್ಬ ವ್ಯಕ್ತಿಯ ಜೊತೆಗೆ ಕಾರಿನಲ್ಲಿ ಹೋಗುತ್ತಿರುವುದನ್ನು ಕಂಡು ಕೋಪಗೊಂಡು ಹಿಂಬಾಲಿಸಿಕೊಂಡು ಹೋಗಿ ಅಡ್ಡಗಟ್ಟಿದ್ದ.

ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿ ಆರೋಪಿ ತನ್ನ ಕಾರಿನಲ್ಲಿದ್ದ 5 ಲೀಟರ್ ಪೆಟ್ರೋಲ್ ತೆಗೆದು ವನಜಾಕ್ಷಿ ಮೇಲೆ ಸುರಿಯಲು ಮುಂದಾದ. ಇದರಿಂದ ಭಯಭೀತಳಾದ ವನಜಾಕ್ಷಿ ಕಾರಿನಿಂದ ಇಳಿದು ಅಲ್ಲಿಂದ ಓಡಿಹೋಗಿದ್ದಾಳೆ. ಆದರೆ ಆಕೆಯನ್ನು ಬಿಡದ ಆರೋಪಿ ಅಟ್ಟಿಸಿಕೊಂಡು ಹೋಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ.

ತೀವ್ರವಾಗಿ ಸುಟ್ಟು ಗಾಯಗಳಾಗಿದ್ದ ವನಜಾಕ್ಷಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *