ಧರ್ಮಸ್ಥಳ: ಶ್ರೀ ಕ್ಷೇತ್ರ ಮಂಜುನಾಥನ ಸನ್ನಿಧಿಯಲ್ಲಿ ಧರ್ಮ ಜಾಗೃತಿ ಸಮಾವೇಶ ನಡೆಯುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂಬುವುದನ್ನು ನೋಡುತ್ತಿದ್ದೇವೆ. ಇಂತಹ ದುಷ್ಟ ಶಕ್ತಿಗಳ ಸಂಹಾರ ಆಗಬೇಕು ಎಂಬುವುದು ಭಕ್ತರ ಅಪೇಕ್ಷೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ನಡೆಯುತ್ತಿದೆ. ಇದರಿಂದ ಮಂಜುನಾಥನ ಭಕ್ತರು ಕಣ್ಣೀರು ಹಾಕುತ್ತಿದ್ದಾರೆ. ಇದಕ್ಕೆ ಇತಿಶ್ರೀ ಹಾಡಲು ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿದೆ ಎಂದರು.

ಈ ಸಂದರ್ಭ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಧರ್ಮಸ್ಥಳ ಚಲೋ ಕಾರ್ಯಕ್ರಮದ ರಾಜ್ಯ ಸಂಚಾಲಕರು ಹಾಗೂ ಶಾಸಕರಾದ ಎಸ್. ಆರ್. ವಿಶ್ವನಾಥ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪ್ರೀತಮ್ ಗೌಡ, ಶಾಸಕರಾದ ಹರೀಶ್ ಪೂಂಜಾ, ಪಕ್ಷದ ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಸ್ಥಳೀಯ ಮುಖಂಡರು ಮತ್ತು ಪ್ರಮುಖರು ಉಪಸ್ಥಿತರಿದ್ದರು.



