ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಉಡುಪಿ: ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜಾಳು ಹೆರಂಜೆ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ತಾಯಿ ಸುಷ್ಮೀತಾ (23) ಮಗು ಶ್ರೇಷ್ಠ (1ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *