Breaking
21 Sep 2026, Mon

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಬಿಹಾರ ಮೂಲದ ಹರ್ಷ ಕುಮಾರ್ ಹಾಗು ಅಮರ್ ಕುಮಾರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು.

ಈ ಬಗ್ಗೆ ಪಣಂಬೂರು ಠಾಣಾ ಪಿಎಸ್ಐರವರಿಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ನಗರ ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತಕರಾದ ಶ್ರೀಕಾಂತ್ ಕೆ ರವರ ನಿರ್ದೆಶನದಂತೆ ಪಣಂಬೂರು ಠಾಣಾ ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ನೇತೃತ್ವದಲ್ಲಿ ಜ್ಞಾನಶೇಖರ ರವರು ತಮ್ಮ ಸಿಬ್ಬಂದಿಗಳ ಜೊತೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ದಾಳಿ ವೇಳೆ ಆರೋಪಿ ಹರ್ಷ ಕುಮಾರ್ ನಿಂದ 1 ಕೆ.ಜಿ 230 ಗ್ರಾಂ ಮತ್ತು ಅಮರ್ ಕುಮಾರ್ ನಿಂದ 80 ಗ್ರಾಂ ಗಾಂಜಾ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದು, ಇದರ ಮೌಲ್ಯ ಸುಮಾರು 75,000 ರೂಪಾಯಿಗಳಷ್ಟು ಅಂದಾಜಿಸಲಾಗಿದೆ. ಆರೋಪಿತರು ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುವ ಸಲುವಾಗಿ ಉಪಯೋಗಿಸುತ್ತಿದ್ದ ಎರಡು ಮೊಬೈಲ್ ಪೋನನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳ ಪೈಕಿ ಒಬ್ಬಾತನು ಬಿಹಾರದ ಪಟ್ನಾದಲ್ಲಿ ಮೀಶೋ ಮತ್ತು ಫ್ಲಿಫ್ ಕಾರ್ಟ್ ಹಬ್ ನಲ್ಲಿ, ಇನ್ನೊಬ್ಬಾತ ದೆಹಲಿಯಲ್ಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದೆ.

ಪಣಂಬೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *