Breaking
22 Mar 2026, Sun

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣ: ಚಾರ್ಮಾಡಿಯ ಖಾಸಗಿ ಹೊಟೇಲ್ ನಲ್ಲಿ ಎಸ್.ಐ.ಟಿ ಅಧಿಕಾರಿಗಳಿಂದ ಸ್ಥಳ ಮಹಜರು

ಉಜಿರೆ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಆರೋಪಿತನಾಗಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನ ವಿಚಾರಣೆಯನ್ನು ಎಸ್ಐಟಿ ಅಧಿಕಾರಿಗಳು ಮುಂದುವರೆಸಿದ್ದಾರೆ.

ಈ ನಿಟ್ಟಿನಲ್ಲಿ ಸೆ.1 ರಂದು ಸಂಜೆ 7 ಗಂಟೆಗೆ ಉಜಿರೆ – ಚಾರ್ಮಾಡಿ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ಗೆ ಕರೆದುಕೊಂಡು ಬಂದು ಎಸ್.ಐ.ಟಿ ಅಧಿಕಾರಿಗಳು ಮಹಜರು ನಡೆಸಿದ್ದಾರೆ.

ಈ ಹೊಟೇಲ್ ನಲ್ಲಿ ಒಂದು ದಿನ ವಾಸ್ತವ್ಯ ಹೂಡಿರುವ ಹೇಳಿಕೆಯನ್ನು ಚಿನ್ನಯ್ಯ ನೀಡಿದ್ದರಿಂದ ಕರೆದುಕೊಂಡು ಎಫ್ಎಸ್ಎಲ್ ವಿಭಾಗದ ಸೋಕೊ ಸಿಬ್ಬಂದಿಗಳ ಜೊತೆ ಮಹಜರು ಕಾರ್ಯ ಮಾಡಿದ್ದಾರೆ.

Leave a Reply

Your email address will not be published. Required fields are marked *