Breaking
21 Sep 2026, Mon

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಹರಿಬಿಟ್ಟ ಪ್ರಕರಣ: ಏಳು ಮಂದಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿ ವೀಡಿಯೊ ಮಾಡಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿಯನ್ನು ಬಜ್ಪೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾರ್ತಿಕ್, ರಾಕೇಶ್ ಸಲ್ಡಾನ, ಜೀವನ್, ಸಂದೀಪ್, ರಕ್ಷಿತ್, ಶ್ರವಣ್, ಸುರೇಶ್ ಎಂಬವರನ್ನು ಪೊಲೀಸರು ಬಂಧಿಸಲಾಗಿದೆ.

ನಗರದ ಹೊರವಲಯದ ಗುರುಪುರ ಕೈಕಂಬದ ಕಿನ್ನಿಕಂಬಳ ಬಳಿಯ ಕಾಲೇಜೊಂದರಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಎರಡು ತಿಂಗಳ ಹಿಂದೆ ಇನ್ಸ್ಟಾಗ್ರಾಮ್ ನಲ್ಲಿ ಕಾರ್ತಿಕ್ ಎಂಬಾತ ಪರಿಚಯವಾಗಿದ್ದ. ಇನ್ಸ್ಟಾಗ್ರಾಮ್ನಲ್ಲಿ ಮಾತನಾಡುತ್ತಿದ್ದ ಪರಿಚಯ ಪ್ರೀತಿಗೆ ತಿರುಗಿತ್ತು.

2025ರ ಜೂನ್ ತಿಂಗಳ ಕೊನೆಯ ಶನಿವಾರ ಮಧ್ಯಾಹ್ನ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾರ್ತಿಕ್ ತನ್ನ ಸ್ಕೂಟರ್ ನಲ್ಲಿ ವಳಚ್ವಿಲ್ ಹೋಟೇಲ್ ಗೆ ಕರೆದೊಯ್ದು ಅಲ್ಲಿ ಊಟ ಮಾಡಿ ಬಳಿಕ ಅಡ್ಯಾರ್ ಫಾಲ್ಸ್ ಬಳಿಯಿರುವ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.

ಅಲ್ಲದೆ, ಇದೇ ವೇಳೆ ಕಾರ್ತಿಕ್ ನ ಸ್ನೇಹಿತ ರಾಕೇಶ್ ಸಲ್ಡಾನ ಕೂಡಾ ಅತ್ಯಾಚಾರ ಎಸಗಿದ್ದ. ರಾಕೇಶ್ ಸಲ್ಡಾನ ಅತ್ಯಾಚಾರ ಎಸಗುತ್ತಿದ್ದ ವೇಳೆ ಕಾರ್ತಿಕ್ ಅದನ್ನು ವೀಡಿಯೊ ಮಾಡಿಕೊಂಡು ಆತನ ಸ್ನೇಹಿತರಿಗೆ ಕಳುಹಿಸಿದ್ದ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ.

ಘಟನೆಗೆ ಸಂಬಂಧಿಸಿ ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *