ಖ್ಯಾತ ಬಾಡಿ ಬಿಲ್ಡರ್ ಓವ೯ರು ಅಮೆರಿಕದಲ್ಲಿ ನಡೆದ ಕಾರು ಅಪಘಾತಕ್ಕೆ ಬಲಿಯಾಗಿದ್ದಾರೆ.
ಮೃತರನ್ನು ಕೋಲಾರದ ಗಾಂಧಿನಗರ ನಿವಾಸಿ ಸುರೇಶ್ ಕುಮಾರ್ (42) ಎಂದು ಗುರುತಿಸಲಾಗಿದೆ.
ಸುರೇಶ್ ಕುಮಾರ್ ಖ್ಯಾತ ಬಾಡಿ ಬಿಲ್ಡರ್ ಆಗಿದ್ದು, ಅಮೆರಿಕಾದ ಫ್ಲೋರಿಡಾ ಹಾಗೂ ಟೆಕ್ಸಾಸ್ ನಗರದ ಮಧ್ಯೆ ಕಾರಿನಲ್ಲಿ ಕೆಲಸದ ನಿಮಿತ್ತ ಹೋಗುತ್ತಿದ್ದರು. ಈ ವೇಳೆ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ, ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ತೀವ್ರವಾದ ಪೆಟ್ಟುಗಳು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಬಾಡಿ ಬಿಲ್ಡರ್ ಸಾವನ್ನಪ್ಪಿದ್ದಾರೆ.
ಫ್ಲೋರಿಡಾದಲ್ಲಿ ಫಿಸಯೋಥೆರಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಸುರೇಶ್ ಕುಮಾರ್, ಬಾಡಿ ಬಿಲ್ಡರ್ ಜೊತೆ ಮಾಡೆಲಿಂಗ್‌ನಲ್ಲಿ ಕೂಡಾ ಹೆಸರು ಮಾಡಿದ್ದರು.

ರಾಜ್ಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಸುರೇಶ್ ಅವರು ನಂತರ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ದೇಶ ವಿದೇಶಗಳಲ್ಲಿ ಖ್ಯಾತಿ ಪಡೆದುಕೊಂಡಿದ್ದರು.


