Breaking
29 Jun 2026, Mon

ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ: ಆರೋಪಿಗಳು ಪೊಲೀಸ್‌ ವಶಕ್ಕೆ

ಉಳ್ಳಾಲ : ನಿಷೇಧಿತ ಮಾದಕ ವಸ್ತು ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.

ಆರೋಪಿಗಳು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಛಣಿ ಗ್ರೌಂಡ್ ನಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ದುಬಾರಿ ಹಣಕ್ಕೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು.

ಈ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ಅವರಿಂದ 15 ಗ್ರಾಂ ಎಂಡಿಎಂಎ, ಡಿಯೋ ಬೈಕ್, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *