Breaking
23 Mar 2026, Mon

ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ ಕುರಿತು ಉಪನ್ಯಾಸ

ಪುತ್ತೂರು: ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ‘ವಿದ್ಯಾಸಂಸ್ಥೆ ಮತ್ತು ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ’ ಕುರಿತು ಉಪನ್ಯಾಸ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಸೆ.3 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಪುತ್ತೂರು ನಗರ ಠಾಣೆಯ ಪೋಲಿಸ್ ಉಪನಿರೀಕ್ಷಕರಾದ ಆಂಜನೇಯ ರೆಡ್ಡಿ ಮಾತನಾಡಿ ಭಗವಂತ ಎಲ್ಲರಿಗೂ ಸಮಾನವಾದ ಅವಕಾಶವನ್ನು ನೀಡಿದ್ದು, ಅವಕಾಶಗಳನ್ನು ಬಳಸಿಕೊಂಡು ಬದುಕಿನಲ್ಲಿ ಸಾಧನೆಯನ್ನು ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕು.

ಸಮಾಜಕ್ಕೆ ಮಾದರಿಯಾಗುವ ವ್ಯಕ್ತಿತ್ವವನ್ನು ಬೆಳೆಸಿಕೊಂಡು, ಸಮಾಜಕ್ಕೆ ನಮ್ಮಿಂದ ಏನಾದರೂ ಕೊಡುಗೆಯನ್ನು ನೀಡಲು ಸಾಧ್ಯವೇ ಎಂಬುದನ್ನು ಯೋಚಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ ಕಾರ್ಯಕ್ರಮ ಆಯೋಜಕರನ್ನು ಅಭಿನಂದಿಸಿ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು. ಸಾಮಾಜಿಕ ಬದುಕಿನಲ್ಲಿ ಉತ್ತಮ ನಡತೆ ನಮ್ಮ ಬದುಕಿಗೆ ದಾರಿದೀಪವಾಗಬಲ್ಲುದು. ನಮ್ಮ ನಡತೆ ಮತ್ತು ಗುಣಗಳು ನಮ್ಮ ಜೀವನಕ್ಕೆ ಅಡಿಪಾಯವಾಗಿದ್ದು, ಪುಸ್ತಕದ ಜ್ಞಾನ ಇದಕ್ಕೆ ಸಹಕಾರಿಯಾಗಬಹುದು ಎಂದು ಹೇಳಿದರು.

ಈ ಸಂದರ್ಭ ಕಾರ್ಯಕ್ರಮದಲ್ಲಿ ಬಾಲ ರಕ್ಷಣಾ ಹಾಗೂ ಮಹಿಳಾ ಸಬಲೀಕರಣ ಘಟಕದ ನಿರ್ದೇಶಕರಾದ ಡಾ. ಆಶಾ ಸಾವಿತ್ರಿ ಹಾಗೂ ಸತ್ಯಲತಾ ರೈ , ವಿದ್ಯಾರ್ಥಿಗಳು ,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *