Breaking
19 Sep 2026, Sat

ಗಣಪತಿ ವಿಸರ್ಜನೆ ವೇಳೆ ತಗುಲಿದ ವಿದ್ಯುತ್ ತಂತಿ: ಓರ್ವ ಸಾವು, ಇಬ್ಬರು ಗಂಭೀರ

ವಿಜಯಪುರ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ವಿದ್ಯುತ್ ಅವಘಡ ಸಂಭವಿಸಿ ಓರ್ವ ಮೃ*ತಪಟ್ಟು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ನಗರದ ಗಾಂಧಿ ಚೌಕ್‌ನಲ್ಲಿ ಇಂದು ಬೆಳಗ್ಗಿನ ವೇಳೆ ನಡೆದಿದೆ.

ಇಲ್ಲಿನ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತಪಟ್ಟ ಯುವಕನಾಗಿದ್ದಾನೆ. ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗಳವಾರ ಏಳನೇ ದಿನದ ಗಣೇಶನ ಮೂರ್ತಿ ವಿಸರ್ಜನೆ ಮೆರವಣಿಗೆ ನಡೆದಿದ್ದು. ಬುಧವಾರ ಬೆಳಗಿನ ಜಾವದವರೆಗೂ ಮೆರವಣಿಗೆ ಸಾಗಿದ್ದು, ಗಾಂಧಿ ಚೌಕ್ ನ ಟಾಂಗಾ ಸ್ಟ್ಯಾಂಡ್ ಬಳಿ ಜೆಡಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆ ಶಾಕ್ ತಗುಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *