Breaking
20 Sep 2026, Sun

ಗಣಪತಿ ವಿಸರ್ಜನೆ ಮಾಡುವ ವೇಳೆ ಆಯಾತಪ್ಪಿ ನೀರಿನಲ್ಲಿ ಬಿದ್ದು ಬಾಲಕ ಸಾವು

ಹೊಳೆಹೊನ್ನೂರು: ಕುರುಬರ ವಿಠಲಾಪುರದಲ್ಲಿ ಗಣಪತಿ ವಿಸರ್ಜನೆ ಮಾಡುವ ವೇಳೆ ಆಯಾತಪ್ಪಿ ನೀರಿನಲ್ಲಿ ಬಿದ್ದು 10 ವರ್ಷದ ಬಾಲಕ ಮೃತಪಟ್ಟ ಘಟನೆ ಸೆ.1ರ ನಡೆದಿದೆ.

ಮೃತ ಬಾಲಕನನ್ನು ಇಟ್ಟಿಗೆಹಳ್ಳಿಯ ಕುಶಾಲ್ (10) ಎಂದು ಗುರುತಿಸಲಾಗಿದೆ.

ಕುರುಬರ ವಿಠಲಾಪುರದ ಬೀದಿಯ ಪುಟಾಣಿ ಮಕ್ಕಳು ಮಣ್ಣು ಬಳಸಿ ತಾವೇ ಗಣಪನ ಮೂರ್ತಿ ತಯಾರಿಸಿ ಪೂಜೆ ಸಲ್ಲಿಸಿದ್ದು, ಪಾಲಕರಿಗೆ ತಿಳಿಸದೆ 3 ಮಕ್ಕಳು ನಾಲೆಗೆ ತೆರಳಿ ಗಣಪತಿ ವಿಸರ್ಜನೆ ಮಾಡುತ್ತಿದ್ದ ವೇಳೆ ಕುಶಾಲ್ ಆಯಾತಪ್ಪಿ ನಾಲೆಗೆ ಬಿದ್ದಿದ್ದಾನೆ ಎನ್ನಲಾಗಿದೆ.

ಮಾಹಿತಿ ತಿಳಿದ ತಕ್ಷಣವೇ ಸ್ಥಳೀಯರು ನಾಲೆಯಲ್ಲಿ ಹುಡುಕಾಟ ನಡೆಸಿ ಬಾಲಕನ ಶವವನ್ನು ಹೊರ ತೆಗೆದಿದ್ದಾರೆ‌. ಬಳಿಕ ಇಟ್ಟಿಗೆಹಳ್ಳಿಯಲ್ಲಿ ಬಾಲಕನ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

Leave a Reply

Your email address will not be published. Required fields are marked *