Breaking
12 May 2026, Tue

ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ, ಜನಜಾಗೃತಿ ವೇದಿಕೆ ವಿಟ್ಲ ಇದರ ವತಿಯಿಂದ ತಾಲೂಕಿನ 15 ಶಾಲಾ – ಕಾಲೇಜುಗಳಲ್ಲಿ ʼಸ್ವಾಸ್ತ್ಯ ಸಂಕಲ್ಪʼ ಕಾರ್ಯಕ್ರಮ ನಡೆಸಿ, ಅಂತಿಮವಾಗಿ ವಿಠಲ ಪದವಿಪೂರ್ವ ಕಾಲೇಜ್ ವಿಟ್ಲ ಇಲ್ಲಿ ಸೆ.02ರಂದು ಸಮಾರೋಪ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಅವರು, ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿದರು. ಜೊತೆಗೆ ಇದಕ್ಕೆ ಕಾರಣಗಳನ್ನು ತಿಳಿಸಿ ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು.

ವಿಠಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಮುಳಿಯ ತಿರುಮಲೇಶ್ವರ ಭಟ್ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷರುಗಳಾದ ಕೈಯೂರ್ ನಾರಾಯಣ ಭಟ್, ಬಾಲಕೃಷ್ಣ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳಾದ ಸುರೇಶ ಗೌಡ, ಕಾಲೇಜು ಪ್ರಭಾರ ಪ್ರಾಂಶುಪಾಲರಾದ ಅಣ್ಣಪ್ಪ ಶಾಸ್ತರ, ರೇಣುಕಾ ಕಣಿಯೂರ್ ಉಪಸ್ಥಿತರಿದ್ದರು.

ಉಪನ್ಯಾಸಕ ಅಣ್ಣಪ್ಪ ಸ್ವಾಗತಿಸಿ, ಉಪನ್ಯಾಸಕಿ ಸವಿತ ವಂದಿಸಿ, ವಿಟ್ಲ ವಲಯ ಮೇಲ್ವಿಚಾರಕ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಲಯದ ಸೇವಾಪ್ರತಿನಿಧಿ ಮತ್ತು ವಿಪತ್ತು ಸದಸ್ಯರು ಸಹಕರಿಸಿದರು.

Leave a Reply

Your email address will not be published. Required fields are marked *