Breaking
21 Mar 2026, Sat

ಸುಳ್ಯದ ಕಲ್ಲುಗುಂಡಯ ಕಡಪಾಲ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಗಂಭೀರ

ಸುಳ್ಯ: ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪದ ಕಲ್ಲುಗುಂಡಿ ಕಡಪಾಲ ಬಳಿ ನಡೆದಿದೆ.

ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಪ್ರಾಯಣಿಸುತ್ತಿದ್ದ ಟ್ಯಾಂಕರ್ ಹಾಗೂ ಸುಳ್ಯದಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಡಸ್ಟರ್ ಕಾರು ನಡುವೆ ಈ ಅಪಘಾತ ಸಂಭವಿಸಿದೆ.ಅವಘಡದಲ್ಲಿ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಅಪಘಾತಕ್ಕೆ ತುತ್ತಾದ ಕಾರು ಕೊಡಗು ಸಿದ್ಧಾಪುರದ ನೆಲ್ಲಿಹುದಿಕೇರಿಯದ್ದು ಎನ್ನಲಾಗಿದೆ. ಗಾಯಾಳುಗಳಿಗೆ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತಿದೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *