Breaking
22 Mar 2026, Sun

ಭಾರೀ ಮಳೆಗೆ ಬಿಸಿಲೆ ಘಾಟ್‌ ಬಳಿ ಭೂಕುಸಿತ: ಸೆ.14ರವರೆಗೆ ಪ್ರವಾಸ ಮುಂದೂಡುವಂತೆ ಡಿಸಿ ಮನವಿ

ಸುಬ್ರಹ್ಮಣ್ಯ: ಭಾರೀ ಮಳೆಯಿಂದ ಕುಕ್ಕೆ ಸುಬ್ರಹ್ಮಣ್ಯ- ಬಿಸಿಲೆ ಘಾಟಿ ರಸ್ತೆಯ ಒಂದು ಬದಿಯ ಮಣ್ಣು ಕುಸಿದು ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಸೆ.03 ರಂದು ಸಂಭವಿಸಿದೆ.

ಬಿಸಿಲೆ ಘಾಟ್‌ ರಾಜ್ಯ ಹೆದ್ದಾರಿ -85 ಅಡ್ಡಹೊಳೆ ಸಮೀಪ ಮುಂಜಾನೆ 3 ಗಂಟೆಗೆ ಭೂ ಕುಸಿತ ಉಂಟಾಗಿ ಸ್ವಲ್ಪ ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಸತತ ಕಾರ್ಯಚರಣೆ ಮೂಲಕ ಬಿದ್ದ ಮಣ್ಣನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಸೆ.14ರವರೆಗೆ ಪ್ರವಾಸ ಮುಂದೂಡುವಂತೆ ಡಿಸಿ ಮನವಿ ರಾಜಧಾನಿ ಬೆಂಗಳೂರು ಸೇರಿ ವಿವಿಧೆಡೆ ಭಾರಿ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು, ಮುಳ್ಳಯ್ಯನಗಿರಿ ತಪ್ಪಲಿನ ಅಲ್ಲಲ್ಲಿ ಧರೆ ಕುಸಿತ ಉಂಟಾಗಿದೆ. ಮುಂದೆ ಧರೆ ಕುಸಿತ ಉಂಟಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸೆ.14ರವರೆಗೆ ಪ್ರವಾಸಿಗರು ತಮ್ಮ ಪ್ರವಾಸವನ್ನು ಮುಂದೂಡುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮುಳ್ಳಯ್ಯನಗಿರಿ ಹಾಗೂ ದತ್ತಪೀಠ ಭಾಗದಲ್ಲಿನ ಹೋಂಸ್ಟೇಗಳಲ್ಲಿ ಬುಕ್ಕಿಂಗ್‌ ಮಾಡಿದವರಿಗೆ ಮಾತ್ರ ವಿನಾಯಿತಿ ನೀಡಿದ್ದು, ಉಳಿದವರಿಗೆ ಅವಕಾಶ ಇಲ್ಲ. ಹೋಮ್‌ಸ್ಟೇ ಮತ್ತು ರೆಸಾರ್ಟ್‌ ಬುಕ್ಕಿಂಗ್‌ ಮಾಡಿದವರಿಗೆ ವಿನಾಯಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *