ಸುಳ್ಯ : ಎರಡು ಸರಕಾರಿ ಬಸ್ ಗಳು ಪರಸ್ಪರ ಡಿಕ್ಕಿ ಹೊಡೆದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಸುಳ್ಯ ಸಮೀಪದ ಅಡ್ಕಾರು ಎಂಬಲ್ಲಿ ಇಂದು ನಡೆದಿದೆ.

ಪುತ್ತೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಸರಕಾರಿ ಬಸ್ ಹಾಗೂ ಸುಳ್ಯದಿಂದ ಪುತ್ತೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ನಡುವೆ ಅಡ್ಕಾರು ಬಸ್ ನಿಲ್ದಾಣ ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ಎರಡೂ ಬಸ್ಸಿನ ಪ್ರಯಾಣಿಕರಿಗೆ ಗಂಭೀರ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಖಾಸಗಿ ವಾಹನಗಳಲ್ಲಿ ಸುಳ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.



