ಉಡುಪಿ: ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಉಡುಪಿಯ ಮಣಿಪಾಲದ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮಧ್ಯಾಹ್ನ ವೇಳೆ ನಡೆದಿದೆ.

ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಎಂಬ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದಳ ಸಿಬ್ಬಂದಿಗಳು ಸಾರ್ವಜನಿಕರ ಸಹಕಾರದೊಂದಿಗೆ ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿ ಬೆಂಕಿ ನಂದಿಸಿದ್ದಾರೆ.

ಅವಘಡದಲ್ಲಿ ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ.



