Breaking
25 Sep 2026, Fri

ಧರ್ಮಸ್ಥಳ ಪ್ರಕರಣ ಎನ್ಐಎ ಗೆ ವಹಿಸಲು ಕರ್ನಾಟಕದ ಸ್ವಾಮೀಜಿಗಳ ನಿಯೋಗ ಕೇಂದ್ರ ಗೃಹ ಸಚಿವ ಅಮಿತಾ ಶಾ ಗೆ ಮನವಿ

ಮಂಗಳೂರು: ಧರ್ಮಸ್ಥಳ ಗ್ರಾಮದ ಶವ ಪ್ರಕರಣದ ವಿಚಾರದಲ್ಲಿ ಕರ್ನಾಟಕದ ಸ್ವಾಮೀಜಿಗಳ ನಿಯೋಗ ಗೃಹ ಸಚಿವ ಅಮಿತ್ ಶಾ ರನ್ನು ಖುದ್ದು ಭೇಟಿ ಮಾಡಿದೆ.

ಈ ವೇಳೆ ಅಮಿತ್ ಶಾ ಜೊತೆ ದೀರ್ಘ ಮಾತುಕತೆ ನಡೆಸಿದ ಸ್ವಾಮೀಜಿಗಳ ನಿಯೋಗವು ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನ ಎನ್ಐಎ ಗೆ ವಹಿಸಬೇಕು. ಎಸ್ಐಟಿ ತನಿಖೆ ಬಗ್ಗೆ ಆಕ್ಷೇಪವಿಲ್ಲ.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಹೊರ ಬರಬೇಕು ಎಂದು ಆಗ್ರಹಿಸಿದ್ದಾರೆ. ಖುದ್ದು ಸ್ವಾಮೀಜಿಗಳಿಂದ ಅಮಿತ್ ಶಾ ಧರ್ಮಸ್ಥಳ ಬುರುಡೆ ಪ್ರಕರಣದ ಮಾಹಿತಿ ಪಡೆದಿದ್ದಾರೆ. ಈ ವೇಳೆ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ. ಪ್ರಕರಣವನ್ನು ಅತೀ ಶೀಘ್ರ ಎನ್ ಐ ಎ ತನಿಖೆಗೆ ವಹಿಸಲು ನಿಯೋಗ ಮನವಿ ಮಾಡಿದೆ.

Leave a Reply

Your email address will not be published. Required fields are marked *