Breaking
25 Sep 2026, Fri

ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆಮಾಡಲು ಯತ್ನ: ಆರೋಪಿ ಬಂಧನ

ವಿಟ್ಲ: ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆಮಾಡಲು ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ. 3 ರಂದು ಸಂಜೆ ನಡೆದಿದೆ.

ಮಹಿಳೆಯು ತನ್ನ ಮಗನನ್ನು ಶಾಲೆಯಿಂದ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಅಶ್ರಫ್‌ ಎಂಬಾತ ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ್ದು, ಈ ವೇಳೆ ಮಹಿಳೆಯ ಬೆರಳುಗಳಿಗೆ ಗಾಯಗಳಾಗಿದೆ. ಇವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗಿದೆ.

ಮಹಿಳೆಯ ಬೊಬ್ಬೆ ಕೇಳಿ ತಾಯಿ ಹಾಗೂ ನೆರೆಹೊರೆ ಮನೆಯವರು ಧಾವಿಸಿದಾಗ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *