Breaking
10 May 2026, Sun

ಪುತ್ತೂರು: ಆರೋಪಿ ಕೃಷ್ಣ ಜೆ.ರಾವ್ ಗೆ ಜಾಮೀನು

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಬಳಿಕ ಯುವತಿ ಗರ್ಭಾವತಿಯಾದಾಗ ವಿವಾಹವಾಗಲು ನಿರಾಕರಿಸಿ ಬಂಧನವಾಗಿದ್ದ ಆರೋಪಿ ಕೃಷ್ಣ ಜೆ.ರಾವ್ ಗೆ ಹೈಕೋರ್ಟ್‌ ಜಾಮೀನು ನೀಡಿದೆ.

ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹ ಪ್ರಕರಣ ದಾಖಲಾಗಿ ನಂತರ ಆತನನ್ನು ಮಂಗಳೂರು ಕಾರಗೃಹದಲ್ಲಿ ಬಂಧಿಸಲಾಗಿತ್ತು.

ಪ್ರಕರಣ ಸಂಬಂಧ ಈಗಾಗಲೇ ಯುವತಿ ಹಾಗೂ ಮಗುವಿನ ಡಿಎನ್ಎ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುವಿಸುವಂತೆ ನ್ಯಾಯಾಲಯ ಆದೇಶ ನೀಡಿದ್ದು ಇದೀಗ ರಿಪೋರ್ಟ್ ಬರುವ ಮುನ್ನವೇ ಆರೋಪಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿ ಬಂಧನದಿಂದ ಬಿಡುಗಡೆಗೊಳಿಸಿದೆ. ಆರೋಪಿಯ ಪರವಾಗಿ ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದಿಸಿದ್ದರು.

Leave a Reply

Your email address will not be published. Required fields are marked *