Breaking
10 May 2026, Sun

ಪುತ್ತೂರಿನ ಪಿಲಿ ರಾಧಣ್ಣ ಖ್ಯಾತಿಯ ರಾಧಾಕೃಷ್ಣ ಶೆಟ್ಟಿ ನಿಧನ

ಪುತ್ತೂರು : ಪುತ್ತೂರಿನ ಪಿಲಿ ಪರಂಪರೆಗೆ ತನ್ನದೇ ಶೈಲಿಯ ಹೆಜ್ಜೆಯ ಹೆಗ್ಗುರುತಿನ ಬ್ರ‍್ಯಾಂಡ್ ತಂದುಕೊಟ್ಟ ಪಿಲಿ ರಾಧಣ್ಣ ಇಂದು ಮುಂಜಾನೆ ಕೊನೆಯುಸಿರೆಲೆದಿದ್ದಾರೆ.

ಕೆಮ್ಮಾಯಿ ನಿವಾಸಿ ರಾಧಾಕೃಷ್ಣ ಶೆಟ್ಟಿ(59) ಅವರನ್ನು ಅನಾರೋಗ್ಯದಿಂದಾಗಿ ಸೆ.5 ರಂದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಲೆದಿದ್ದಾರೆ ಎಂದು ತಿಳಿದುಬಂದಿದೆ.

65 ವರ್ಷಗಳ ಹಿಂದೆ ಪುತ್ತೂರಿನಲ್ಲಿ ಇದದ್ದು ಎರಡು ಪಿಲಿ. ಒಂದು ಪಿಲಿ ಸಂಕಪ್ಪಣ್ಣ, ಇನ್ನೊಂದು ಪಿಲಿ ಗಂಗಣ್ಣ. ಪಿಲಿ ಸಂಕಪ್ಪ ಶೆಟ್ಟಿ ಅವರ ಪುತ್ರನೇ ಪಿಲಿ ರಾಧಣ್ಣ. ಸಂಕಪ್ಪ ಅವರು ಸುಮಾರು 30 ವರ್ಷಗಳ ಕಾಲ ಕುಣಿದವರು. ರಾಧಾಕೃಷ್ಣ ಶೆಟ್ಟಿ ಅವರಿಗೆ 9 ವರ್ಷ (4ನೇ ತರಗತಿ) ಇರುವಾಗ ತಂದೆ ಸಂಕಪ್ಪ ಅವರು ಕಿನ್ನಿಪಿಲಿ ವೇಷಧಾರಿಯಾಗಿ ಸೇರಿಸಿಕೊಂಡರು. ಅಲ್ಲಿಂದ ಪಿಲಿ ವೇಷ ಶುರುವಾಗಿ ಅಪ್ಪ-ಮಗ ಇಬ್ಬರು 10 ವರ್ಷಗಳ ಕಾಲ ಜತೆ ಜತೆಯಾಗಿ ಹೆಜ್ಜೆ ಹಾಕಿದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗು ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *