ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಿದ್ಧಕಟ್ಟೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇಲ್ಲಿ ನಡೆಯಿತು.

ಸಮಾರಂಭವನ್ನು ಸ್ಥಳೀಯ ಗಣ್ಯರಾದ ಶ್ರೀ ಅರ್ಕ ಕೀರ್ತಿ ಇಂದ್ರ ಇವರು ಉದ್ಘಾಟಿಸಿ, “ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡಬೇಕು ಹಾಗೂ ವ್ಯಕ್ತಿತ್ವವನ್ನು ವಿಕಸನ ಮಾಡಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮವಾದಂತಹ ವೇದಿಕೆ ಆಗಿದೆ” ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಇವರು ಶಿಬಿರಾರ್ಥಿಗಳಿಗೆ ವಿವಿಧ ನಿದರ್ಶನಗಳನ್ನು ನೀಡುತ್ತಾ, ವಿದ್ಯಾರ್ಥಿ ಜೀವನವು ಅಮೂಲ್ಯವಾದದ್ದು ಹಾಗೂ ಸಿಗುವಂತ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ತಮ್ಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕು”ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಶ್ರೀ ಪ್ರಭಾಕರ ಪ್ರಭು ಅಧ್ಯಕ್ಷರು ಸಹಕಾರಿ ವ್ಯವಸಾಯಿಕ ಸೇವಾ ಸಂಘ ನಿಯಮಿತ ಸಿದ್ಧಕಟ್ಟೆ ಇವರು,” ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯು ಸಹಕಾರಿಯಾಗಿದೆ” ಎಂದು ಹೇಳಿದರು.

ಸಮಾರಂಭದಲ್ಲಿ ಉಪಸ್ಥಿತರಿದ್ದ ಶ್ರೀ ಶಿವಯ್ಯ ಅಧ್ಯಕ್ಷರು ರೋಟರಿ ಕ್ಲಬ್ ಫಲ್ಗುಣಿ ಸಿದ್ದಕಟ್ಟೆ ಹಾಗೂ ಶ್ರೀ ಉಮೇಶ್ ಗೌಡ ಅಧ್ಯಕ್ಷರು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಪ್ರೌಢಶಾಲೆ ಸಿದ್ದಕಟ್ಟೆ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ವೀರಪ್ಪಗೌಡ ಕೊಡಂಗೆ, ಪ್ರಾಂಶುಪಾಲರಾದ ಶ್ರೀ ಉದಯಕುಮಾರ್, ಹಿರಿಯ ಉಪನ್ಯಾಸಕರಾದ ಶ್ರೀ ಶ್ರೀನಿವಾಸ ನಾಯ್ಕ, ಉಪ ಪ್ರಾಂಶುಪಾಲರಾದ ಶ್ರೀಮತಿ ಲೋನಾ ಲೋಬೋ, ಶ್ರೀ ಸಹ ಶಿಕ್ಷಕರಾದ ಶ್ರೀ ಉಮೇಶ್ ಕುಮಾರ್ ವಿ ಕರ್ಕೇರ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಶ್ರೀ ಶೀನಪ್ಪ ಎನ್ ಸ್ವಾಗತಿಸಿದರು, ಶಿಬಿರಾರ್ಥಿ ಶ್ರೀ ಲತೀಶ ದ್ವಿತೀಯ ಕಲಾ ವಿಭಾಗ ವಂದಿಸಿದರು ಹಾಗೂ ಕನ್ನಡ ಉಪನ್ಯಾಸಕರಾದ ಶ್ರೀ ಸಂಜಯ್ ಬಿ ಎಸ್ ಇವರು ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *