Breaking
21 Jun 2026, Sun

ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ ಆರೋಪ: ದೂರು ದಾಖಲು

ಕುಂದಾಪುರ: ಬಿಜೆಪಿ ಮುಖಂಡನೊಬ್ಬ ಮಹಿಳೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಕುರಿತು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯನ್ನು ರಟ್ಟಾಡಿ ಗ್ರಾಮದ ಮಣಿಮಕ್ಕಿ ನಿವಾಸಿ ನವೀನ್ ಚಂದ್ರ ಶೆಟ್ಟಿ ಎಂದು ಗುರುತಿಸಲಾಗಿದೆ.

ಧರ್ಮಸ್ಥಳ ಸ್ವಸಹಾಯ ಸಂಘದ ಸೇವಾ ಪ್ರತಿನಿಧಿಯಾಗಿ ಕೆಲಸ ಮಾಡಿಕೊಂಡಿದ್ದ 29ರ ಹರೆಯದ ರಟ್ಟಾಡಿ ಗ್ರಾಮದ ದೂರುದಾರ ಮಹಿಳೆ. ಸೆ.2 ರಂದು ನಡೆಯಲಿದ್ದ ಧರ್ಮಸ್ಥಳದ ಧರ್ಮ ಸಂರಕ್ಷಣಾ ಯಾತ್ರೆಯ ಸಭೆಯ ಆಮಂತ್ರಣ ಪತ್ರಿಕೆ ನೀಡಲು ರಟ್ಟಾಡಿ ಶ್ರೀರಟ್ಟೆಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಮುಖ್ಯಸ್ಥ ಹಾಗೂ ಬಿಜೆಪಿ ಮುಖಂಡ ನವೀನ ಚಂದ್ರ ಶೆಟ್ಟಿಗೆ ಕರೆ ಮಾಡಿದ್ದರು.

ಈ ವೇಳೆ ನವೀನ್ ಚಂದ್ರ ಶೆಟ್ಟಿ ತಾನು ಮನೆಯಲ್ಲಿರುವುದಾಗಿ ಹೇಳಿದ್ದು, ಮಧ್ಯಾಹ್ನ 1ಗಂಟೆಯೊಳಗೆ ಮನೆಗೆ ಬರುವಂತೆ ತಿಳಿಸಿದ್ದಾರೆ. ಅದರಂತೆ ಮಹಿಳೆ ಮಧ್ಯಾಹ್ನ 12ಗಂಟೆಯ ಸುಮಾರಿಗೆ ನವೀನ್ ಚಂದ್ರ ಶೆಟ್ಟಿಯ ಮನೆಗೆ ಹೋದಾಗ ಅವರು ಜಗುಲಿಯ ಕುರ್ಚಿಯಲ್ಲಿ ಕುಳಿತ್ತಿದ್ದರು.

ಈ ವೇಳೆ ಮಹಿಳೆಯು ಆಮಂತ್ರಣ ಪತ್ರಿಕೆಯನ್ನು ಕೈಗೆ ಕೊಟ್ಟಾಗ ಆತ ಮಹಿಳೆಯ ಕೈಯನ್ನು ಸ್ವರ್ಶಿಸಿ ಆಹ್ವಾನ ಪತ್ರಿಕೆ ತೆಗೆದುಕೊಂಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Leave a Reply

Your email address will not be published. Required fields are marked *