ಉಡುಪಿ: ಕಾಲೇಜು ಶುಲ್ಕ ಕಟ್ಟಲು ಹೋದ ಯುವತಿ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ಸೆ.4 ರಂದು ನಡೆದಿದೆ.
ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿಯಾಗಿರುವ ಪ್ರಸ್ತುತ ಉಡುಪಿ ಜಿಲ್ಲೆಯ ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಸಹನಾ (24) ನಾಪತ್ತೆಯಾದ ಯುವತಿಯಾಗಿದ್ದಾಳೆ.

ಬುಧವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಶುಲ್ಕ ಕಟ್ಟಲೆಂದು ಮನೆಯಿಂದ ಹೋದ ಸಹನಾ ವಾಪಾಸು ಬಾರದೆ ನಾಪ್ತತೆಯಾಗಿದ್ದಾಳೆ.

ಈಕೆ 5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.


