Breaking
20 Jun 2026, Sat

ವಿಟ್ಲ ಜೇಸಿ ಶಾಲೆ: ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ

ವಿಟ್ಲ: ವಿಟ್ಲ ಬಸವನಗುಡಿ ವಿಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಭಾರತದ ಸ್ವಾತಂತ್ರ್ಯಕ್ಕಾಗಿ ಬದುಕು ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗೌರವ ಸಲ್ಲಿಸಲಾಯಿತು.

ಹತ್ತನೇ ತರಗತಿಯ ವಿದ್ಯಾರ್ಥಿನಿ ಅಶ್ವಿನಿ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡಿದರು. ಸ್ಕೌಟ್ & ಗೈಡ್ ಮಕ್ಕಳಿಂದ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಶಾಲಾ ಸಹ ಶಿಕ್ಷಕಿ ಐಡಾ ಹಾಗೂ ಭವ್ಯ ಶ್ರೀ ಸಹಕರಿಸಿದರು.

Leave a Reply

Your email address will not be published. Required fields are marked *