ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿ ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತುಂಗಾ ನದಿಯ ಉಪನದಿಗೆ ಬಿದ್ದ ಘಟನೆ ನಡೆದಿದೆ.

ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಕಾರ್ಕಳದಿಂದ ಶೃಂಗೇರಿ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅದೃಷ್ಷವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



