Breaking
12 May 2026, Tue

ಕರಿಯಂಗಳದ ಪುಂಚಮೆಯಲ್ಲಿ ಧಾರ್ಮಿಕ ಶಿಕ್ಷಣ ಕೇಂದ್ರವೊಂದರ ವಿರುದ್ಧ ಧ್ವನಿವರ್ಧಕ ವಿಚಾರದಲ್ಲಿ ಕೇಸ್

ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಕಾರ್ಯಚರಿಸುತ್ತಿರುವ ಧಾರ್ಮಿಕ ಶಿಕ್ಷಣ ಕೇಂದ್ರವೊಂದರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿಗೆ ನಿರ್ಮಾಣವಾಗಿರುವ ಈ ಧಾರ್ಮಿಕ ಕೇಂದ್ರದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಧ್ವನಿವರ್ಧಕ ಅಳವಡಿಸಿಕೊಂಡು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಧ್ವನಿಯಲ್ಲಿ ದಿನಕ್ಕೆ 05 ಬಾರಿಯಂತೆ ಅಜಾನ್ ಕೂಗಿರುವುದರಿಂದ ಸುತ್ತಮುತ್ತಲಿನ ಪರಿಸರದಲ್ಲಿರುವ ಜನರಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಲ್ಲದೆ ಧ್ವನಿವರ್ಧಕಗಳ ಬಳಕೆಯ ಬಗೆಗಿನ ಕಾನೂನನ್ನು ಉಲ್ಲಂಘಿಸಿರುತ್ತಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *