Breaking
12 May 2026, Tue

ಬೈಕ್ ಗೆ ಶಾಲಾ ಬಸ್ ಡಿಕ್ಕಿ, ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಶಾಲಾ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉಡುಪಿಯ ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ನಡೆದಿದೆ.

ಮೃತ ಬೈಕ್ ಸವಾರನನ್ನು ಗಣೇಶ್ ಎಂದು ಗುರುತಿಸಲಾಗಿದೆ.ಇವರು ದೊಂಡರಂಗಡಿ ಕಡೆಯಿಂದ ಪೆರ್ಡೂರು ಕಡೆಗೆ ಬರುತ್ತಿದ್ದಾಗ ಅಮೃತ ಭಾರತಿ ಶಾಲೆಯ ಬಸ್ ಎದುರಿನಿಂದ ಹೋಗುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪರಿಣಾಮ ಬೈಕ್ ಸವಾರ ಗಣೇಶ್ ಹಾಗೂ ಸಹಸವಾರ ಸುದರ್ಶನ್ ಬೈಕ್ ಸಮೇತ ರಸ್ತೆ ಬಿದ್ದಿದ್ದಾರೆ. ಇದರಿಂದ ಗಂಭೀರ ವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದುಬಂದಿದೆ.

ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *